ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಗ್ಯವನ್ನು ಕೊಡದಿದ್ದರೂ ಪರವಾಗಿಲ್ಲ, ಬೆಲೆಏರಿಕೆ ದೌರ್ಭಾಗ್ಯ ಹೇರಬೇಡಿ:ವಿಜಯೇಂದ್ರ

Published : 15 ಜೂನ್ 2024, 13:26 IST
Last Updated : 15 ಜೂನ್ 2024, 13:26 IST
ಫಾಲೋ ಮಾಡಿ
Comments

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ. ಇದಕ್ಕೆ ವಿಪಕ್ಷಗಳಿಂದ ಭಾರಿ ಟೀಕೆ ವ್ಯಕ್ತವಾಗಿವೆ.

ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಈ ಕುರಿತು ಬರೆದುಕೊಂಡಿರುವ ವಿಜಯೇಂದ್ರ, 'ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ. ನೀವು (ಕಾಂಗ್ರೆಸ್) ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ' ಎಂದು ಹೇಳಿದ್ದಾರೆ.

'ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ ₹3 ಹಾಗೂ ಡೀಸೆಲ್ ಮೇಲೆ ₹3.50 ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಏರಿಕೆ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ' ಎಂದು ಹೇಳಿದ್ದಾರೆ.

'ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿರುವ ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಬಿಜೆಪಿ ಬೀದಿಗಿಳಿದು ಹೋರಾಡಲಿದೆ' ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT