ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Petrol Diesel Price Hike ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು: ಅಶೋಕ

Published : 15 ಜೂನ್ 2024, 11:31 IST
Last Updated : 15 ಜೂನ್ 2024, 11:31 IST
ಫಾಲೋ ಮಾಡಿ
Comments

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ. 

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

'ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ' ಎಂದು ಆರೋಪಿಸಿದ್ದಾರೆ.

'ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT