ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ–ಸಿಇಟಿ) ನಡೆಯಲಿದೆ.

ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಪಿಜಿ–ಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಹೇಳಿದ್ದಾರೆ.

ಗೇಟ್ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿಸಿಇಟಿ-24 ಗೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.