ಮಂಡ್ಯ: ‘ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರು ದೇವರು ಎಂದೇ ನಂಬಿದ್ದಾರೆ. ದೇವರ ಮೇಲೆ ಅನುಮಾನ ಪಡಲು ಸಾಧ್ಯವೇ? ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಶ್ರೀಗಳ ಹೆಸರನ್ನು ಅನವಶ್ಯಕವಾಗಿ ಎಳೆದು ತರಲಾಗಿದೆ’ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ನಿರ್ಮಲಾನಂದನಾಥ ಸ್ವಾಮೀಜಿಗಳ ಪೂಜೆಯೇ ಕಾರಣ. ಅಂಥವರ ಬಗ್ಗೆ ಅನುಮಾನ ಪಡುವ ಅಗತ್ಯವಿಲ್ಲ. ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ಪ್ರಕರಣದಲ್ಲಿ ಶ್ರೀಗಳ ಹೆಸರು ತಂದಿದ್ದಾರೆ. ಇದರಿಂದ ಸ್ವಾಮೀಜಿ ಮನಸ್ಸಿಗೆ ನೋವಾಗಿದೆ. ಈ ಬಗ್ಗೆ ಅವರು ಎಲ್ಲೂ ಮಾತನಾಡಿಲ್ಲ’ ಎಂದರು.

‘ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಜಕೀಯ ಪಿತೂರಿ ಇರುವುದು ಎದ್ದು ಕಾಣುತ್ತಿದೆ. ಕೆಲವು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಿಂದ ಫೋನ್ ಕದ್ದಾಲಿಕೆ ಆಗುತ್ತದೆ. ಆದರೆ ಮೈತ್ರಿ ಸರ್ಕಾರದಿಂದಲೇ ಫೋನ್ ಕದ್ದಾಲಿಕೆ ಆಗಿದೆ ಎಂಬುದು ಸುಳ್ಳು’ ಎಂದರು.

ಇದನ್ನೂ ಓದಿ...ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ ಶ್ರೀಗಳ ಫೋನ್ ಕದ್ದಾಲಿಸಿಲ್ಲ: ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.