ಬೆಂಗಳೂರು: ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡೆದಿದ್ದ ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಕೈಬಿಡುವಂತೆ ಸಿಬಿಐ ಸಲ್ಲಿಸಿದ್ದ ಅಂತಿಮ ವರದಿಯನ್ನು ತಿರಸ್ಕರಿಸಿರುವ ವಿಶೇಷ ನ್ಯಾಯಾಲಯ, ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ಸೋಮವಾರ ಆದೇಶಿಸಿದೆ.

ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ಕದ್ದಾಲಿಕೆ ಕುರಿತು ಪ್ರಾಥಮಿಕ ತನಿಖೆ ನಡೆಸಿದ್ದ ಸಿಬಿಐ, ಬೆಂಗಳೂರು ನಗರದ ಹಿಂದಿನ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮತ್ತು ಫರಾಜ್ ಎಂಬುವವರ ನಡುವಿನ ಸಂಭಾಷಣೆಯ ಆಡಿಯೊ ಸೋರಿಕೆ ಮಾಡಿದ್ದ ಕುರಿತು ಎಫ್ಐಆರ್ ದಾಖಲಿಸಿ ತನಿಖೆ ನಡೆಸಿತ್ತು. ಆಡಿಯೊ ಸೋರಿಕೆ ಪ್ರಕರಣದ ತನಿಖೆ ಅಂತ್ಯಗೊಳಿಸುವಂತೆ ಸಿಬಿಐ ಎಸ್ಪಿ ಕಿರಣ್ ಎಸ್. ನ್ಯಾಯಾಲಯಕ್ಕೆ ಜೂನ್ 30ರಂದು ವರದಿ ಸಲ್ಲಿಸಿದ್ದರು.

ಸಿಬಿಐ ವರದಿಯನ್ನು ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಕದ್ದಾಲಿಕೆ ಮತ್ತು ಆಡಿಯೊ ಸೋರಿಕೆ ಎರಡನ್ನೂ ಸೇರಿಸಿಕೊಂಡು ತನಿಖೆ ನಡೆಸುವಂತೆ ಕೋರಿದ್ದರು. ಸಿಬಿಐ ವರದಿ ಪ್ರಶ್ನಿಸಿ ಮೂರನೇವ್ಯಕ್ತಿಯೊಬ್ಬರೂ ಅರ್ಜಿ ಸಲ್ಲಿಸಿದ್ದರು. ಈ ಎಲ್ಲ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ಆದೇಶ ಪ್ರಕಟಿಸಿದರು.

‘ಸಂತ್ರಸ್ತ (ಭಾಸ್ಕರ್ ರಾವ್) ಮತ್ತು ಮೂರನೇ ವ್ಯಕ್ತಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸಿಬಿಐ ಸಲ್ಲಿಸಿದ್ದ ‘ಬಿ’ ವರದಿಯನ್ನೂ ತಿರಸ್ಕರಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸಿಬಿಐ ಅಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಸಿಬಿಐಗೆ ಸೂಕ್ತ ನಿರ್ದೇಶನ ಕಳುಹಿಸಬೇಕು’ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.