ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇದೇ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರದಲ್ಲಿ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಲ್ಲದೇ, ಕಲಬುರಗಿ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.