ಬೆಂಗಳೂರು: 'ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು' ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್ ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ವಾದ ಮಂಡಿಸಿ, 'ಆರೋಪಿಯು ತುಂಬಾ ಬಲಾಢ್ಯರು. ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಹಾಗೂ ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಬರಿದೆ ಸಮಯ ಕೇಳುತ್ತಿದ್ದಾರೆ‘ ಎಂದರು.

ಮುಂದುವರಿದು, ‘ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ₹2 ಲಕ್ಷ ನೀಡಿದ್ದಾರೆ. ಬೇಡ ಎಂದರೂ ಅವರ ಪರ್ಸಿನಲ್ಲಿ ತುರುಕಿ ಕಳಿಸಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯ. ಇಟ್ಟುಕೊ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೊ ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ’ ಎಂದರು.

‘ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು‘ ಎಂದು ಕೋರಿದರು.

ವಾದ ಆಲಿಸಿದ ನ್ಯಾಯಾಧೀಶ ಎನ್.ಎಂ. ರಮೇಶ್ ಅವರು ಇಂದೇ ಮಧ್ಯಾಹ್ನ 2.45ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.