ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಕ್ಸೊ ಪ್ರಕರಣ | ಅಗತ್ಯವಿದ್ದರೆ ಯಡಿಯೂರಪ್ಪ ಬಂಧನ: ಪರಮೇಶ್ವರ

Published : 13 ಜೂನ್ 2024, 5:18 IST
Last Updated : 13 ಜೂನ್ 2024, 5:18 IST
ಫಾಲೋ ಮಾಡಿ
Comments

ತುಮಕೂರು: ‘ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಬಂಧಿಸುತ್ತಾರೆ. ಅಗತ್ಯ ಇದೆ ಅಂತ ನಾನು ಹೇಳಲು ಆಗುವುದಿಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ’ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಹೈದರಾಬಾದ್‌ನಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT