ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಕಾರನ್ನು ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ತಡೆದ ಪೊಲೀಸರು ಚಿತ್ರದುರ್ಗಕ್ಕೆ ಮರಳುವಂತೆ ಸೂಚನೆ ನೀಡಿದ್ದಾರೆ.

ಮುರುಘಾ ಮಠದಿಂದ ಹೊರನಡೆದು ಅಜ್ಞಾತ ಸ್ಥಳಕ್ಕೆ ತೆರಳಿದ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಹುಡುಕಾಟ ಆರಂಭಿಸಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಅವರನ್ನು ಹಾವೇರಿ ಪೊಲೀಸರು ಬಂಕಾಪುರದ ಬಳಿ ಪತ್ತೆ ಮಾಡಿದ್ದಾರೆ. ಹಾವೇರಿ ಪೊಲೀಸರು ಅವರೊಂದಿ ಚರ್ಚೆ ನಡೆಸಿ ಚಿತ್ರದುರ್ಗಕ್ಕೆ ಮರಳುವಂತೆ ಮನವೊಲಿಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಅವರನ್ನು ಕರೆತರಲಾಗುತ್ತದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಮಠಕ್ಕೆ ದೌಡಾಯಿಸಿದ ಪೊಲೀಸರು, ಅಜ್ಞಾತ ಸ್ಥಳಕ್ಕೆ ಶರಣರು?

'ಶರಣರನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು. ವಕೀಲರೊಬ್ಬರನ್ನು ಭೇಟಿಯಾಗಲು ಹಾವೇರಿಗೆ ತೆರಳಿದ್ದರು. ಅವರು ಮಧ್ಯಾಹ್ನದ ಹೊತ್ತಿಗೆ ಮಠಕ್ಕೆ ಮರಳಲಿದ್ದಾರೆ' ಎಂದು ಮಠದ ಸಲಹಾ ಸಮಿತಿ ಸದಸ್ಯ ಆನಂದಪ್ಪ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.