ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿ) ನೇಮಕಾತಿಯಲ್ಲಿ ಸೇವಾ ಹಿರಿತನ ಕಡೆಗಣಿಸಿರುವ ಆರೋಪ ವ್ಯಕ್ತವಾದ ಬೆನ್ನಲ್ಲೇ, ರಾಜ್ಯ ಸರ್ಕಾರದ ಆದೇಶದ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ.

ರಾಜ್ಯದ ನೂತನ ಡಿಜಿ ಆಗಿ ಪ್ರವೀಣ್ ಸೂದ್ ಅವರು ಶುಕ್ರವಾರವಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ. ಸೇವಾ ಹಿರಿತನದಲ್ಲಿ ಮೊದಲಿಗರಾಗಿದ್ದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ.ಪ್ರಸಾದ್ ಅವರು ಗೃಹ ರಕ್ಷಕ ದಳದ ಡಿಜಿಪಿ ಆಗಿ ವರ್ಗವಾಗಿದ್ದಾರೆ.

ಸರ್ಕಾರದ ಆದೇಶ ಪ್ರಶ್ನಿಸಿ ಪ್ರಸಾದ್ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಲಿದ್ದಾರೆ ಎಂಬ ಚರ್ಚೆಯೂ ಇಲಾಖಾ ವಲಯ ದಲ್ಲಿ ನಡೆಯುತ್ತಿದೆ. ಈ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಪ್ರಸಾದ್, ‘ಸದ್ಯಕ್ಕೆ ಅಂಥದ್ದೇನೂ ಇಲ್ಲ. ಈ ಬಗ್ಗೆ ಹೆಚ್ಚು ಮಾತನಾಡಲಾರೆ’ ಎಂದಷ್ಟೇ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.