ಬೆಂಗಳೂರು: ವರ್ಗಾವಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ರಾಜಕೀಯ ಪ್ರಭಾವ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂಥವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಇದೇ 20ರಂದು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ನೀಡಿರುವ ಮುಖ್ಯಮಂತ್ರಿ, ‘ಸರ್ಕಾರಿ ನೌಕರರು ಸರ್ಕಾರಕ್ಕೆ ಸಲ್ಲಿಸುವ ಮನವಿಗಳನ್ನು ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಸಬೇಕು. ಇಲಾಖೆಯ ಸಚಿವರಿಗೆ ನೇರವಾಗಿ ಸಲ್ಲಿಸಬಾರದೆಂದು 1966ರ ಆಗಸ್ಟ್ 29ರಂದು ಆದೇಶ ಹೊರಡಿಸಲಾಗಿದೆ. ಅಲ್ಲದೆ, 1980ರ ಮೇ 21ರಂದು ಹೊರಡಿಸಿದ ಅಧಿಕೃತ ಜ್ಞಾಪನ ಪತ್ರದಲ್ಲಿ, ತಮ್ಮ ಸೇವಾ ವಿಷಯಗಳ ಬಗ್ಗೆ ರಾಜಕೀಯ ಅಥವಾ ಇತರ ಯಾವುದೇ ಪ್ರಭಾವವನ್ನು ಬೀರಬಾರದೆಂದು ಸರ್ಕಾರಿ ನೌಕರರಿಗೆ ನಿರ್ದೇಶನ ನೀಡಲಾಗಿದೆ’ ಎಂದಿದ್ದಾರೆ.

‘ಆದರೆ, ಕೆಲವು ಸರ್ಕಾರಿ ನೌಕರರು ಈ ಸೂಚನೆಗಳನ್ನು ಪಾಲಿಸುತ್ತಿಲ್ಲ. ತಮ್ಮ ವರ್ಗಾವಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ನೇರವಾಗಿ ಮನವಿಗಳನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ, ರಾಜಕೀಯ ಪ್ರಭಾವ ಬೀರುತ್ತಿರುವುದೂ ಗೊತ್ತಾಗಿದೆ. ಹೀಗಾಗಿ, ಈ ಹಿಂದೆಯೇ ನೀಡಿರುವ ಸರ್ಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಸರ್ಕಾರಿ ನೌಕರರಿಗೆ ಸೂಚನೆ ನೀಡಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅಗತ್ಯ ಕ್ರಮ ವಹಿಸಬೇಕು’ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.