ಬೆಂಗಳೂರು: ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೀಡಿದ್ದ ನೋಟಿಸ್ ಸ್ವೀಕರಿಸಲು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ನಿರಾಕರಿಸಿದ್ದಾರೆ.

ಪಶ್ಚಿಮ ಬಂಗಾಳದ ಕೃಷ್ಣನಗರ ಹೋಟೆಲ್ನಲ್ಲಿ ಅಮಿತ್ ಮಾಳವೀಯಾ ಅವರನ್ನು ಭೇಟಿಯಾದ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದರು. ಆದರೆ, ಪೊಲೀಸರು ತಂದಿದ್ದ ನೋಟಿಸ್ ಸ್ವೀಕರಿಸದ ಅಮಿತ್ ಮಾಳವೀಯಾ, ‘ಈಗಾಗಲೇ ಇ–ಮೇಲ್ ಮೂಲಕ ನನಗೆ ನೋಟಿಸ್ ಬಂದಿದೆ. ನೋಟಿಸ್ಗೆ ಉತ್ತರ ನೀಡಲು 7 ದಿನ ಅವಕಾಶವಿದೆಯೆಂದು ಹೇಳಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಚೋದನಕಾರಿ ವಿಡಿಯೊ ಪೋಸ್ಟ್ ಅಪ್‌ಲೋಡ್ ಮಾಡಿದ್ದ ಆರೋಪದಡಿ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೂ ನೋಟಿಸ್ ಜಾರಿ ಆಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.