ಬೆಂಗಳೂರು: ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯದೆ ಸರ್ಕಾರಿ ವಿಶ್ವವಿದ್ಯಾಲಯಗಳು ಕೈಗೊಳ್ಳುವ ನೇಮಕಾತಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ವೈದ್ಯಕೀಯ, ತಾಂತ್ರಿಕ ಮತ್ತು ಕೃಷಿ ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ವಿಶ್ವವಿದ್ಯಾಲಯಗಳು ನೇಮಕಾತಿಯ ವಿವರಗಳನ್ನು ತಕ್ಷಣ ಸಲ್ಲಿಸಬೇಕು. ಇಲಾಖೆಯ ಅನುಮೋದನೆ ಇಲ್ಲದೆ ಭರ್ತಿ ಮಾಡಿದ ಹುದ್ದೆಗಳ ವಿವರ ನೀಡಬೇಕು ಎಂದು ಸೂಚಿಸಿದೆ.

ಕೆಲ ವಿಶ್ವವಿದ್ಯಾಲಯಗಳು ಹುದ್ದೆಗಳ ಭರ್ತಿಗೆ ಪೂರ್ವಾನುಮತಿ ಪಡೆಯದೆ ನೇಮಕಾತಿ ಮಾಡಿಕೊಂಡಿವೆ. ನಂತರ ವೇತನ ಅನುದಾನ ಕೋರಿ ಕಡತಗಳನ್ನು ಸಲ್ಲಿಸಿವೆ. ಇದು ನಿಯಮಗಳಿಗೆ ವಿರುದ್ಧವಾದ ಕ್ರಮ ಎಂದೂ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.