ಬೆಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಂಡೂರ್ ಗ್ರಾಮದಲ್ಲಿನ ಕೋಳಿ ತ್ಯಾಜ್ಯ ನಿರ್ವಹಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಬಿ.ಪ್ರವೀಣ್ ಸೇರಿದಂತೆ 11 ಜನ ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಪುತ್ತೂರು ತಹಶೀಲ್ದಾರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಕೋರಿಕೆ ಏನು?:

‘ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಂಡೂರ್ ಗ್ರಾಮದಲ್ಲಿ ಕೇಶವ ಪಾಟಾಳಿ ಮತ್ತು ಪಿ.ಮನು ಪಾಟಾಳಿ ಕೋಳಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ವಹಿಸುತ್ತಿದ್ದಾರೆ. ಘಟಕದಿಂದ ಸುಮಾರು ಎರಡು ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಪರಿಸರ ಹಾಗೂ ಗಾಳಿ ಕಲುಷಿತಗೊಂಡಿದೆ. ಸಾರ್ವಜನಿಕರಿಗೆ ಉಸಿರಾಡಲು ಕಷ್ಟಕರವಾದ ವಾತಾವರಣ ನಿರ್ಮಾಣವಾಗಿದೆ. ಘಟಕದ ಸಮೀಪವೇ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿವೆ. ದುರ್ವಾಸನೆಯಿಂದ ವಿದ್ಯಾರ್ಥಿಗಳು ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ, ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ಸಂಬಂಧಿಸಿದ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.