ನವದೆಹಲಿ: ಕರ್ನಾಟಕದಲ್ಲಿ ಉಂಟಾಗಿರುವ ವಿದ್ಯುತ್ ಅಭಾವವನ್ನು ಸರಿಪಡಿಸಲು ಉತ್ತರ ಪ್ರದೇಶ ಸೇರಿದಂತೆ ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಸೃಷ್ಟಿಯಾಗಿದೆ. 1500 ಮೆಗಾವಾಟ್ನಷ್ಟು ಕೊರತೆಯಾಗಿದೆ. ಜನರು ಅಥವಾ ರೈತರು ಪ್ರತಿಭಟನೆ ಮಾಡುವುದಾದರೆ ಬಿಜೆಪಿ ಕಚೇರಿ ಮುಂದೆ ಹೋಗಿ ಪ್ರತಿಭಟಿಸಲಿ. ಇಂದಿನ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ’ ಎಂದು ದೂರಿದರು.

ಜಾರ್ಜ್ ಕಾಣೆಯಾಗಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಜಾರ್ಜ್ ಕಾಣೆಯಾಗಿಲ್ಲ. ದೆಹಲಿಗೆ ಬಂದು ಇಂಧನ ಸಚಿವರನ್ನು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಕೇಂದ್ರ ಗ್ರಿಡ್ನಿಂದ ಹೆಚ್ಚುವರಿ ವಿದ್ಯುತ್ ಒದಗಿಸುವಂತೆ ಒತ್ತಡ ಹೇರಿದ್ದೇನೆ’ ಎಂದರು. ನಾನು ಬಿಜೆಪಿ ಕಚೇರಿಗೆ ಹೋಗಿ ಕುಳಿತುಕೊಳ್ಳಬೇಕಾ ಅಥವಾ ಬೊಮ್ಮಾಯಿ ಮನೆಗೆ ಹೋಗಿ ಕುಳಿತುಕೊಳ್ಳಬೇಕಾ ಎಂದು ಪ್ರಶ್ನಿಸಿದರು.

‘ಒಂದೇ ದಿನದಲ್ಲಿ ಕೊರತೆ ನೀಗಿಸಲು ಸಾಧ್ಯವಿಲ್ಲ. ವಿದ್ಯುತ್ ಉಪಕೇಂದ್ರಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಕ್ರಮ ವಹಿಸಲಾಗುತ್ತಿದೆ. 1200 ಮೆಗಾವಾಟ್ ಸೌರ ಇಂಧನ ಉತ್ಪಾದನೆಗೆ ಟೆಂಡರ್ ಕರೆಯಲಾಗಿದೆ. ಸೌರ ಘಟಕಗಳನ್ನು ನಿರ್ಮಿಸಲು ಸರ್ಕಾರಿ ಭೂಮಿಯನ್ನು ಸಹ ಕೇಳಿದ್ದೇವೆ. ಗುತ್ತಿಗೆಗೆ ಭೂಮಿ ನೀಡುವಂತೆ ರೈತರಿಗೆ ಮನವಿ ಮಾಡಿದ್ದೇವೆ’ ಎಂದರು.

ವಿದ್ಯುತ್ ಪೂರೈಕೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೂ ಮನವಿ ಮಾಡಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.