'ಪ್ರಜಾವಾಣಿ' ಪಾಲಿಗಿದು ಅಮೃತ ಮಹೋತ್ಸವದ ವರ್ಷ. 75 ವರ್ಷಗಳ ಹಾದಿಯಲ್ಲಿ ಜನಮುಖಿಯಾಗಿರುವ ಪತ್ರಿಕೆ, ನಮ್ಮ ನಡುವಿನ ಪ್ರತಿಭಾವಂತರನ್ನು ಗುರುತಿಸುವ ಕೆಲಸವನ್ನೂ ಲಾಗಾಯ್ತಿನಿಂದ ಮಾಡುತ್ತಾ ಬಂದಿದೆ. 2020ರಿಂದ ಪ್ರತಿವರ್ಷ ಆಯಾ ಇಸವಿಯ ಕೊನೆಯ ಎರಡು ಅಂಕಿಗಳಿಗೆ ಹೊಂದುವಷ್ಟು ಸಂಖ್ಯೆಯ ಸಾಧಕರನ್ನು ಆಯ್ಕೆ ಮಾಡಿ, ಸನ್ಮಾನಿಸುತ್ತಿರುವುದೇ ಇದಕ್ಕೆ ಸಾಕ್ಷಿ. ಶಿಕ್ಷಣ, ಸಮಾಜಸೇವೆ, ವಿಜ್ಞಾನ, ಕ್ರೀಡೆ, ಸಾಹಿತ್ಯ–ಕಲೆ–ಮನರಂಜನೆ, ಪರಿಸರ, ಉದ್ಯಮ, ಸಂಶೋಧನೆ, ಆಡಳಿತ, ಕನ್ನಡ ಕೈಂಕರ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮಷ್ಟಕ್ಕೆ ತಾವು ಮುಗುಮ್ಮಾಗಿ ಸೇವೆ ಸಲ್ಲಿಸುತ್ತಿರುವವರನ್ನು 23 ಸಾಧಕರನ್ನು 2023ರ ಹೊಸವರ್ಷಕ್ಕೆ ಸಾಂಕೇತಿಕವಾಗಿ ಮಾಡಲಾಗಿದೆ. ಸಾಧಕರ ಕಿರು ಪರಿಚಯವನ್ನು ಇಲ್ಲಿ ನೀಡಲಾಗಿದ್ದು, ಅವರ ಹೆಜ್ಜೆಗುರುತುಗಳು ಈ ಅಕ್ಷರಚೌಕಟ್ಟನ್ನೂ ಮೀರಿದ್ದು. ಹೊಸ ವರ್ಷವನ್ನು ಈ ಸಾಧಕರೊಟ್ಟಿಗೆ ಬರಮಾಡಿಕೊಳ್ಳುವುದಕ್ಕೆ ಪತ್ರಿಕಾ ಬಳಗ ಹರ್ಷಿಸುತ್ತದೆ.

ಹೆಸರು: ರೂಮಿ ಹರೀಶ್

ವೃತ್ತಿ: ಸಂಗೀತಗಾರ್ತಿ

ಸಾಧನೆ: ಲಿಂಗತ್ವ ಅಲ್ಪಸಂಖ್ಯಾತರ ಪರವಾದ ಹೋರಾಟ

ಖ್ಯಾತ ಹಿಂದೂಸ್ತಾನಿ ಸಂಗೀತಗಾರ್ತಿ, ಈಗ ಲಿಂಗ ಪರಿವರ್ತಿತ ಪುರುಷ. ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಅನೇಕ ವರ್ಷಗಳಿಂದ ಲಿಂಗತ್ವ ಹೋರಾಟ ಮಾಡುತ್ತಿದ್ದಾರೆ ಬೆಂಗಳೂರಿನ ರೂಮಿ ಹರೀಶ್.

ಬಹುಮುಖ ಪ್ರತಿಭೆ ಎಂದೇ ಗುರುತಿಸಬಹುದಾದ ಇವರು, ಲಿಂಗತ್ವ ಅಲ್ಪಸಂಖ್ಯಾತರೆಂದರೆ ಮೂಗು ಮುರಿಯುವ ವ್ಯವಸ್ಥೆಯಲ್ಲಿ ಅವರ ಬೆನ್ನಿಗೆ ನಿಲ್ಲುವ ಇವರು ಕಾನೂನಿನ ನೆರವು ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಈ ವಿಷಯದಲ್ಲಿ ಪ್ರಾಜೆಕ್ಟ್ ವರ್ಕ್‌ಗಳನ್ನೂ ಅವರು ಮಾಡಿದ್ದಾರೆ. ಅಂಕಣಕಾರರಾಗಿಯೂ ಅನೇಕ ಲೇಖನಗಳನ್ನು ಬರೆದಿದ್ದಾರೆ.

ಸಂಗೀತ ಕ್ಷೇತ್ರದಲ್ಲೂ ಅವರದು ದೊಡ್ಡ ಹೆಸರು. ಆ ಕ್ಷೇತ್ರದಲ್ಲಿನ ಲಿಂಗತಾರತಮ್ಯದ ನೆಲೆಗಳನ್ನು ಸೂಕ್ಷ್ಮಸ್ತರದಲ್ಲಿ ವಿರೋಧಿಸುತ್ತಲೇ, ಇದೀಗ ಚಿತ್ರಕಲೆಯ ಮೂಲಕ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೋವು–ನಲಿವುಗಳು, ಪ್ರಸಕ್ತ ವಿದ್ಯಮಾನಗಳಿಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ವಿಚಾರಗೋಷ್ಠಿಗಳಲ್ಲಿ ಸಮುದಾಯದ ಪರವಾಗಿ ಮಾತನಾಡುವ ಗಟ್ಟಿ ಧ್ವನಿ ಇವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.