ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ ಬೆನ್ನಲ್ಲೆ ಭವಾನಿ ಅವರು ಎಸ್ಐಟಿ ಎದುರು ಶುಕ್ರವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾದರು.

ಭವಾನಿ ರೇವಣ್ಣ ಅವರು ಬಂಧನ ಭೀತಿ ಎದುರಿಸುತ್ತಿದ್ದರು. ಎಸ್‌ಐಟಿ ಮೂರು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದರು.

ಹೈಕೋರ್ಟ್ ಸೂಚನೆ ನೀಡಿದ ಬಳಿಕ ಪ್ರತ್ಯಕ್ಷರಾದ ಭವಾನಿ ರೇವಣ್ಣ ಅವರು ವಕೀಲರ ಜತೆಗೆ ವಿಚಾರಣೆಗೆ ಹಾಜರಾದರು. ತನಿಖಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದರು.

‘ನನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ನಾನು ಯಾರನ್ನೂ ಈ ಪ್ರಕರಣ ಸಂಬಂಧ ಭೇಟಿ ಮಾಡಿಲ್ಲ. ಪುತ್ರನ ವಿರುದ್ಧ ಕೆಲವರು ಷಡ್ಯಂತ್ರ ನಡೆಸಿದ್ಧಾರೆ’ ಎಂದು ತನಿಖಾಧಿಕಾರಿಗಳಿಗೆ ಭವಾನಿ ಹೇಳಿದರು ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.