ನವದೆಹಲಿ: ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜಾಮೀನು ನಿರಾಕರಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಜೆಡಿಎಸ್ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅಕ್ಟೋಬರ್ 21ರಂದು ಜಾಮೀನು ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದ ಹೈಕೋರ್ಟ್, ‘ಮೇಲ್ನೋಟಕ್ಕೆ ಪ್ರಜ್ವಲ್ ಒಬ್ಬ ಲಂಪಟ ಹಾಗೂ ತನ್ನ ಇಂದ್ರಿಯಗಳ ಮೇಲಿನ ನಿಯಂತ್ರಣ ಕಳೆದುಕೊಂಡು, ಕಾಮಾತುರನಾಗಿ ವರ್ತಿಸಿದ್ದು, ಈ ನೀಚತನದ ಕೃತ್ಯಗಳು ಸ್ವಸ್ಥ ಸಮಾಜದ ಬೆನ್ನುಹುರಿಯಲ್ಲಿ ಚಳಿ ಹುಟ್ಟಿಸುವಂತಿದೆ’ ಎಂದು ವ್ಯಕ್ತಪಡಿಸಿತ್ತು.

ವಕೀಲ ಬಾಲಾಜಿ ಶ್ರೀನಿವಾಸನ್ ಮೂಲಕ ಸಲ್ಲಿಸಲಾದ ಅರ್ಜಿಯು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬರಲಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆ ಕೆಲಸದಾಕೆ ನೀಡಿರುವ ದೂರಿನ ಅನ್ವಯ ಅತ್ಯಾಚಾರದ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ನಿಯಮಿತ ಜಾಮೀನು ಕೋರಿದ್ದರು. ಇದರಲ್ಲಿ ಅವರು ಎರಡನೇ ಆರೋಪಿಯಾಗಿದ್ದಾರೆ. ಮೊದಲನೇ ಆರೋಪಿ ಜೆಡಿಎಸ್ನ ಶಾಸಕ ಮತ್ತು ಪ್ರಜ್ವಲ್ ಅವರ ತಂದೆಯೂ ಆದ ಎಚ್.ಡಿ.ರೇವಣ್ಣ ಈಗಾಗಲೇ ಜಾಮೀನು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.