ಬೆಂಗಳೂರು: ‘ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ, ಬಿಜೆಪಿ– ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿ ತಲೆಮರೆಸಿಕೊಳ್ಳಲು ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಬಿಜೆಪಿ ನಾಯಕರು ವಾಮಮಾರ್ಗದಲ್ಲಿ ಸಹಕಾರ ನೀಡಿದ್ದಾರೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

‘ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ರಾಜ್ಯಕ್ಕೆ ಕರೆತಂದು ಕಾನೂನು ಮೂಲಕ ಶಿಕ್ಷೆ ವಿಧಿಸಲು ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿ ಯಾರಾದರೂ ಸತ್ತರೆ ಅವರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಗರು, ಪ್ರಜ್ವಲ್ ರೇವಣ್ಣನ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೆ, ಚುನಾವಣೆಯಲ್ಲಿ ಅಂಥವನ ಪರ ನಿಂತು ಮತಯಾಚಿಸಿರುವ ಬಿಜೆಪಿ ನಾಯಕರು, ಮಹಿಳೆಯರ ವಿರೋಧಿಗಳು ಎನ್ನುವುದನ್ನು ಸಾಬೀತುಪಡಿಸಿದ್ದಾರೆ’ ಎಂದೂ ದೂರಿದೆ.

‘ನೂರಾರು ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಪ್ರಜ್ವಲ್ ರೇವಣ್ಣ ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದರೂ ಬಿಜೆಪಿ ನಾಯಕರು ಎಲ್ಲೂ ಧ್ವನಿ ಎತ್ತಿಲ್ಲ. ಅಲ್ಲದೆ, ಅವನ ವಿರುದ್ಧ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿಲ್ಲ. ಆ ಮೂಲಕ ಅವನ ಬೆಂಬಲಕ್ಕೆ ಕರ್ನಾಟಕ ರಾಜ್ಯದ ಬಿಜೆಪಿ ಘಟಕ ನಿಂತಿರುವುದು ಬಹಿರಂಗವಾಗಿದೆ’ ಎಂದೂ ಪ್ರತಿಭಟನಕಾರರು ದೂರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಪಕ್ಷದ ಮುಖಂಡರಾದ ಆನಂದ್, ಜಿ. ಪ್ರಕಾಶ್, ಹೇಮರಾಜು, ಉಮೇಶ್, ರಂಜಿತ್, ಚಂದ್ರಶೇಖರ್, ಚಿನ್ನಿ ಪ್ರಕಾಶ್, ಓಬಳೇಶ್ ಮಹಿಳಾ ಕಾಂಗ್ರೆಸ್ ಮುಖಂಡರಾದ ಉಮಾಬಾಯಿ, ಸಾಹಿನ್ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.