ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಆರೋಪ|ಭವಾನಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Published 14 ಜೂನ್ 2024, 15:43 IST
Last Updated 14 ಜೂನ್ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ. ಏತನ್ಮಧ್ಯೆ, ‘ತೀರ್ಪು ಪ್ರಕಟವಾಗುವನಕ ಭವಾನಿ ಅವರಿಗೆ ನೀಡಲಾಗಿರುವ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮುಂದುವರೆಯಲಿದೆ’ ಎಂದು ಆದೇಶಿಸಿದೆ.

ಈ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪೂರ್ಣಗೊಳಿಸಿತು. ಪ್ರಾಸಿಕ್ಯೂಷನ್‌ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಸುದೀರ್ಘ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT