ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನವರನ್ನು ಬಳಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ, ಆ ಬಗ್ಗೆ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್ ಅವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪತ್ರ ಬರೆದಿದೆ.

ಈ ಬಗ್ಗೆ ಆಯೋಗವು ಬಿಜಯ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದಿದೆ. ಈ ಪ್ರಕರಣದಲ್ಲಿ ಓರ್ವ ಸಂತ್ರಸ್ತೆಯು ತನ್ನ ಮಗಳೊಂದಿಗೆ ವಿಡಿಯೊ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಬಾಲಕಿಯರನ್ನೂ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಮೂಡಲಾರಂಭಿಸಿದೆ. ಆದ್ದರಿಂದ ಪ್ರಕರಣದ ವಿಚಾರಣೆ ನಡೆಸಿ, ಬಾಲಕಿಯರನ್ನು ಬಳಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ವರದಿಯನ್ನು ನೀಡಿ ಎಂದು ಪತ್ರದಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.