ಬೆಳಗಾವಿ: ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಎಚ್.ಡಿ.ದೇವೇಗೌಡ ಹಾಗೂ ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ರಾಜಕೀಯ ಬಿಡಬೇಕು’ ಎಂದು ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು.

‘ವಿಡಿಯೊ ಬಿಡುಗಡೆಯಲ್ಲಿ ಯಾರ ಪಾತ್ರವಿದೆ ಎಂಬುದು ಮುಖ್ಯವಲ್ಲ. ಯಾರು ತಪ್ಪು ಮಾಡಿದ್ದಾರೆ ಎಂಬುದು ಮುಖ್ಯ. ಇದು ಸಮಾಜವೇ ತಲೆತಗ್ಗಿಸುವ ಕೆಲಸ. ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊರಬೇಕು’ ಎಂದು ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಯಬೇಕು. ಅದರಿಂದ ಎಲ್ಲ ಧರ್ಮಗಳ, ಜಾತಿಗಳ ಜನರಿಗೆ ಯೋಜನೆಗಳ ಸೌಲಭ್ಯಗಳು ತಲುಪುತ್ತವೆ. 2021ರಲ್ಲಿ ಮೋದಿ ಸರ್ಕಾರ ಜನಗಣತಿ ನಡೆಸಲಿಲ್ಲ. ಇದೇ ಕಾರಣದಿಂದ 10 ಕೋಟಿ ಜನ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದರಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗದವರೇ ಇದ್ದಾರೆ’ ಎಂದರು.

‘ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಒಂದು ದೇಶ, ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬಹುದು. 2029ರಲ್ಲಿ ಚುನಾವಣೆಯೇ ನಡೆಯುವುದಿಲ್ಲ ಎಂಬ ಭಯವೂ ನಮಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.