ಬೆಂಗಳೂರು: ‘ಎಸ್ಡಿಪಿಐ, ಪಿಎಫ್ಐಯಂಥ ಸಂಘಟನೆಗಳನ್ನು ನಿಷೇಧಿಸುವಂತೆ ಬೇಡಿಕೆ ಇಟ್ಟಿರುವ ಎಬಿವಿಪಿ ಕಾರ್ಯಕರ್ತರ ಭಾವನೆಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಸರ್ಕಾರ ಕೂಡಾ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಎಬಿವಿಪಿ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ತಮ್ಮ ಸರ್ಕಾರಿ ನಿವಾಸದ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಡಿ.ಜಿ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆಗಳಿಂದ ಹಿಡಿದು, ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯಂಥ ಘಟನೆಗಳ ಹಿನ್ನೆಲೆಯಲ್ಲಿ ಈ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ’ ಎಂದಿದ್ದಾರೆ.

‘ನನ್ನನ್ನು ಭೇಟಿಯಾಗಲು ನನಗೆ ಮನೆಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಎಬಿವಿಪಿ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ‘ ಎಂದೂ ಅವರು ಹೇಳಿದ್ದಾರೆ.

ಓದಿ...

ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ: ಲಘು ಲಾಠಿ ಪ್ರಹಾರ

ನೆತ್ತರುಧಾರೆ ಹರಿದಷ್ಟೂ ಭರ್ಜರಿ ಮತಧಾರೆ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಗುಡುಗು

ಸಾವಿಗೆ ಸಾವೇ ಪರಿಹಾರ ಎಂಬುದರಲ್ಲಿ ನಮಗೆ ನಂಬಿಕೆ ಇಲ್ಲ: ಆರಗ ಜ್ಞಾನೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.