ಬೆಂಗಳೂರು: ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ನೇಮಕಗೊಂಡಿರುವ ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಅವರು ಮೇ ಕೊನೆಯ ವಾರದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ನೇಮಕ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಪ್ರವೀಣ್ ಸೂದ್, ‘ಇದು ಅನಿರೀಕ್ಷಿತ ನೇಮಕ. ಕೊಟ್ಟ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತೇನೆ. ಸದ್ಯದ ನಿರ್ದೇಶಕರ ಅಧಿಕಾರ ಅವಧಿ ಮೇ 25ಕ್ಕೆ ಮುಗಿಯಲಿದೆ. ಅದಾದ ನಂತರವೂ ದೆಹಲಿಗೆ ಹೋಗಿ ಅಧಿಕಾರ ಸ್ವೀಕರಿಸುತ್ತೇವೆ’ ಎಂದರು.

ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪ‍್ರವೀಣ್ ಸೂದ್, 86ನೇ ಬ್ಯಾಚ್ ಐಪಿಎಸ್ ಅಧಿಕಾರಿ. ನಂಜನಗೂಡು ಉಪವಿಭಾಗದ ಎಎಸ್ಪಿಯಾಗಿ ವೃತ್ತಿ ಆರಂಭಿಸಿದ್ದ ಅವರು ಸದ್ಯ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. 59 ವಯಸ್ಸಿನ ಪ್ರವೀಣ್, ಮುಂಬರುವ ಎರಡು ವರ್ಷಗಳ ಕಾಲ ಸಿಬಿಐ ನಿರ್ದೇಶಕರಾಗಿ ಕೆಲಸ ಮಾಡಿ ನಿವೃತ್ತಿ ಹೊಂದಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.