ಬೆಂಗಳೂರು: ‘ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶವಿದ್ದು, 320 ಕಿ.ಮೀ ಕರಾವಳಿ ಪ್ರದೇಶವಿದೆ. ನಮಗೆ ಇದುವರೆಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರವೂ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ನಡೆಸಿದರು.

‘ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಮೂಲಕ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು’ ಎಂದು ಹೇಳಿದರು.

‘ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು’ ಎಂದು ಸಲಹೆ ನೀಡಿದರು.

‘ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ’ ಎಂದರು.

‘ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಜಿಲ್ಲಾಧಿಕಾರಿಗಳು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು’ ಎಂದರು.

‘ಕರಾವಳಿಯಲ್ಲಿ ಸಿಆರ್ಝೆಡ್ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು’ ಎಂದರು.

‘ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್ ದೊರೆಯುತ್ತಿದೆ. ರಾಜ್ಯದಲ್ಲಿರುವ 25 ಸಾವಿರ ಸ್ಮಾರಕಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ‘ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ– 2015’ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್ ಪ್ಲಾನ್ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸೂಚಿಸಿದರು.

‘ಸ್ಥಳೀಯ ಜನರು, ಎನ್ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಬೇಕು. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದು’ ಎಂದೂ ಸಲಹೆ ನೀಡಿದರು.

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ: ‘ಕರಾವಳಿಯಲ್ಲಿ ವೈದ್ಯಕೀಯ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳಿವೆ. ಆದರೆ, ಒಂದೇ ಒಂದು ಪಂಚತಾರಾ ಹೊಟೇಲ್ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆ ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ’ ಎಂದರು.

ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ– ಸಚಿವ ಎಚ್.ಕೆ. ಪಾಟೀಲ ಸಲಹೆ: ‘ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಅವುಗಳ ಮಹತ್ವ ಅರಿತು ಗೈಡ್ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಕ್ರಿಯಾ ಯೋಜನೆ ರೂಪಿಸಿ. ಬಜೆಟ್ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. ನಿಮ್ಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು ಮೂರು ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರುತ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ಗೆ ಹಣಕಾಸು ಒದಗಿಸಲಾಗುವುದು’ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.

‘ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನಹರಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಗಮನಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಯನ್ನು ಪ್ರವಾಸೋದ್ಯಮ ಜಿಲ್ಲೆಯಾಗಿ ಮಾಡಬಹುದು’ ಎಂದೂ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.

ಅದಕ್ಕೆ ಧ್ವನಿಗೂಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.