ಬಳ್ಳಾರಿ: ಬಳ್ಳಾರಿ ಜಿಲ್ಲೆಯಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ಆಗಿದ್ದ ಶ್ರೀಧರ ದೊಡ್ಡಿ ಅವರಿಗೆ ಬೆಂಗಳೂರಿನ ರಾಜ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳ ಚಿನ್ನದ ಪದಕವನ್ನು ರಾಜ್ಯಪಾಲವಜುಭಾಯ್ ವಾಲಾ ಪ್ರದಾನ ಮಾಡಿದ್ದಾರೆ.

‘36 ವರ್ಷ ಪ್ರಾಮಾಣಿಕ ಮತ್ತು ದಕ್ಷತೆಯಿಂದ ಕೆಲಸ ಮಾಡಿದ್ದಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜುಇದ್ದರು ಎಂದು,’ ಈಗ ರಾಯಚೂರು ವಿಭಾಗದ ಗುಪ್ತಚರ ದಳದ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿರುವ ಶ್ರೀಧರ್ ದೊಡ್ಡಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ರಾಯಚೂರು, ಮತ್ತು ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ಈ ಮುಂಚೆ 2010 ರಲ್ಲಿ ಮುಖ್ಯಮಂತ್ರಿ ಗಳ ಚಿನ್ನದ ಪದಕ ದೊರಕಿತ್ತು. ರಾಜ್ಯದಲ್ಲಿ ಒಟ್ಟು 66 ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ,’ಎಂದರು.

ಆದೋನಿಯವರಾದ ದೊಡ್ಡಿಯವರು 1982ರಲ್ಲಿ ಸಿರಿಗೇರಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಕೆಲಸಕ್ಕೆ ಸೇರಿದ್ದರು. 2000 ರಲ್ಲಿ ಕಲಬುರಗಿ ಪಿಎಸ್ಐ, 2008ರಲ್ಲಿ ಸಿಪಿಐ ನಂತರ ಡಿವೈಎಸ್ಪಿ ಆಗಿ ಪದೋನ್ನತಿ ಪಡೆದರು.

ಶುಕ್ರವಾರದಿಂದ ರಾಯಚೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದೇನೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.