ಕಲಬುರಗಿ: ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸುವಂತೆ ಕೋರಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಮನರೇಗಾ ಯೋಜನೆ ಅಡಿಯಲ್ಲಿ ನಿಯಮಿತವಾಗಿ ಉದ್ಯೋಗ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದ್ದು ವೈಯಕ್ತಿಕ ಹಾಗೂ ಸಮುದಾಯದ ಸ್ವತ್ತುಗಳನ್ನು ನಿರ್ಮಿಸುತ್ತಿದೆ. ಪ್ರಸಕ್ತ ವರ್ಷದಲ್ಲಿ ಕರ್ನಾಟಕ 13 ಕೋಟಿ ಕೆಲಸದ ದಿನಗಳನ್ನು ಕಾರ್ಮಿಕ ಬಜೆಟ್'ನಲ್ಲಿ ಹಂಚಿಕೆ ಮಾಡಿದ್ದು ಈಗಾಗಲೇ 8.48 ಕೋಟಿ ಕೆಲಸದ ದಿನಗಳ ಉದ್ಯೋಗ ಸೃಷ್ಟಿಸಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಸರ್ಕಾರವು ಘೋಷಿಸಿದೆ.

ಪ್ರಸ್ತುತ ಬರ ಪೀಡಿತ ತಾಲ್ಲೂಕುಗಳಲ್ಲಿ 20.86 ಲಕ್ಷ ಕುಟುಂಬಗಳಿಗೆ 7.36 ಕೋಟಿ ಕೆಲಸದ ದಿನಗಳ ಉದ್ಯೋಗವನ್ನು ಒದಗಿಸಲಾಗಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬರ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಕ್ಕಾಗಿ ಬೇಡಿಕೆಯಿದ್ದು ರಾಜ್ಯ ಸರ್ಕಾರ ಈಗಾಗಲೇ 100 ದಿನಗಳಿಂದ 150 ದಿನಗಳವರೆಗೆ ಕೆಲಸದ ದಿನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮನರೇಗಾ ಕೆಲಸದ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಲು ಮತ್ತು ಕರ್ನಾಟಕದ ಆರ್ಥಿಕ ವರ್ಷ 2023–24ಕ್ಕೆ ಕಾರ್ಮಿಕ ಬಜೆಟ್ ಅನ್ನು 1300 ಲಕ್ಷದಿಂದ 1800 ಲಕ್ಷ ಕೆಲಸದ ದಿನಗಳಿಗೆ ಹೆಚ್ಚಿಸಲು ಮನವಿ ಸಲ್ಲಿಸಿದ್ದೇನೆ ಎಂದು ಸಚಿವರು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.