ಬೆಂಗಳೂರು: ‘ಕಾವೇರಿ ನದಿ ದಂಡೆಯಲ್ಲಿರುವ ಶ್ರೀರಂಗಪಟ್ಟಣದ ಗೋಸಾಯಿ ಘಾಟ್ನ ನಿಮಿಷಾಂಭ ದೇಗುಲದ ಬಳಿ ನಡೆಯುವ ಅಸ್ಥಿ ವಿಸರ್ಜನೆ ಕ್ರಿಯೆಗಳನ್ನು ಸಂಪೂರ್ಣ ನಿಷೇಧಿಸಬೇಕು’ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿದೆ.

ಈ ಸಂಬಂಧ ವಕೀಲ ಕುಶಾಲ್ ಕುಮಾರ್ ಕೌಶಿಕ್ ಸೇರಿದಂತೆ ಆರು ಜನರು ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಕಾವೇರಿ ನದಿ ದಂಡೆಯಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಯಾವುದೇ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು’ ಎಂಬ ಅರ್ಜಿದಾರರ ಕೋರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರು ಖುದ್ದು ವಾದ ಮಂಡಿಸಿ, ‘ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಳವಾಗಿದೆ. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ವರದಿಯಲ್ಲಿ ಕಾವೇರಿ ನದಿ ತೀರದಲ್ಲಿನ ಮಾಲಿನ್ಯ ಹೆಚ್ಚಾಗಲು ಕಾರಣ ಏನು ಎಂಬುದನ್ನು ಪಟ್ಟಿ ಮಾಡಲಾಗಿದೆ. ಈ ಹಿಂದೆ ಸಾಮಾನ್ಯವಾಗಿ ಈ ಪ್ರದೇಶದಲ್ಲಿನ ಎರಡು ಸ್ಥಳಗಳಲ್ಲಿ ಮಾತ್ರವೇ ಅಸ್ಥಿ ವಿಸರ್ಜನೆ ನಡೆಯುತ್ತಿತ್ತು. ಈಗ ನದಿ ತೀರದ ಎಲ್ಲೆಡೆಯೂ ಅಸ್ಥಿ ವಿಸರ್ಜನೆ ಕ್ರಿಯೆಗಳನ್ನು ನಡೆಸಲಾಗುತ್ತಿದೆ. ನದಿಯ ನೀರನ್ನು ಕುಡಿಯುವುದಕ್ಕೂ ಬಳಕೆ ಮಾಡಲಾಗುತ್ತಿದೆ. ಜತೆಗೆ ಭಕ್ತಾದಿಗಳಿಗೆ ಇದೇ ನೀರನ್ನು ಅಭಿಷೇಕ ರೂಪದಲ್ಲೂ ನೀಡಲಾಗುತ್ತದೆ. ಕನಿಷ್ಠ ಶ್ರೀರಂಗಪಟ್ಟದ ನಿಮಿಷಾಂಭ ದೇವಸ್ಥಾನದ ತೀರದಲ್ಲಿಯಾದರೂ ಅಸ್ಥಿ ವಿಸರ್ಜನೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕು’ ಎಂದು ಕೋರಿದರು.

ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ‘ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕು’ ಎಂದು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಿತು.

ಮನವಿ ಏನು?:

‘ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರವೇ ಅವಕಾಶ ನೀಡಿ ಸೂಕ್ತ ಮಾರ್ಗಸೂಚಿ ರೂಪಿಸಬೇಕು. ಉತ್ತರಾಖಂಡ ಹೈಕೋರ್ಟ್ ಹೇಗೆ; ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ‘ಜ್ಯುರಿಸ್ಟಿಕ್ ಪರ್ಸನ್’ (ಕಾನೂನಾತ್ಮಕ ವ್ಯಕ್ತಿ-ವಾಸ್ತವ ವ್ಯಕ್ತಿಯಲ್ಲದ ಆದರೆ, ಕಾನೂನಿನನ್ವಯ ಮಾನ್ಯ ಮಾಡಲಾದ ಸಂಘ ಸಂಸ್ಥೆಗಳು, ನಿಸರ್ಗದ ಭಾಗಗಳನ್ನು ವ್ಯಕ್ತಿಗಳ ರೀತಿಯಲ್ಲಿ ಕಾನೂನಾತ್ಮಕವಾಗಿ ಪರಿಗಣಿಸುವುದು) ಎಂದು ಘೋಷಿಸಿದೆಯೋ, ಅದೇ ರೀತಿ ಕಾವೇರಿ ನದಿಯನ್ನೂ ‘ಜ್ಯುರಿಸ್ಟಿಕ್ ಪರ್ಸನ್’ ಎಂದು ಪರಿಗಣಿಸಬೇಕು. ಈ ದಿಸೆಯಲ್ಲಿ ಸಮಿತಿಯೊಂದನ್ನು ರಚಿಸಬೇಕು. ಸಮಿತಿಯು, ನದಿಗೆ ಹಾನಿ ಮಾಡಿದವರ ವಿರುದ್ಧ ದಾವೆ ಹೂಡಲು ಅವಕಾಶ ಕಲ್ಪಿಸುವುದಕ್ಕೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಅರ್ಜಿಯಲ್ಲಿ ಏನಿದೆ?:

‘ನದಿಗೆ ಹೂವು, ಪ್ಲ್ಯಾಸ್ಟಿಕ್ ಬ್ಯಾಗ್ ಮತ್ತು ಬಟ್ಟೆ ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನದಿ ತೀರದಲ್ಲಿನ ಭೂ ಮಾಲೀಕರು ತಮ್ಮ ಜಮೀನನ್ನು ಅಸ್ಥಿ ವಿಸರ್ಜನೆ ಮತ್ತಿತರರ ಚಟುವಟಿಕೆಗಳಿಗೆ ನೀಡಿ ಹಣ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು. ನದಿಯಲ್ಲಿ ಸ್ನಾನ ಮಾಡುವವರು ಶಾಂಪೂ, ಸೋಪು, ಬಾಡಿ ವಾಷ್, ಡಿಟರ್ಜಂಟ್ ಬಳಸುವುದಕ್ಕೆ ನಿಷೇಧ ಹೇರಬೇಕು. ಅಗತ್ಯ ಶೌಚಾಲಯ ನಿರ್ಮಿಸಬೇಕು’ ಎಂಬುದೂ ಸೇರಿದಂತೆ ಹಲವು ಕೋರಿಕೆಗಳನ್ನು ಅರ್ಜಿಯಲ್ಲಿ ಮಂಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.