ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಶೀಘ್ರದಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸುವ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಲಾಗುವುದು. ಅದೇ ರೀತಿ ಸ್ವಂತ ವಿಮಾನಯಾನ ಕಂಪನಿ ಸ್ಥಾಪಿಸಿ, ರಾಜ್ಯದ ಒಳಗೆ ಸೇವೆ ಒದಗಿಸುವ ಪ್ರಸ್ತಾವವಿದೆ' ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರವೇ ಮಾಡಲಿದೆ. ಇನ್ನು ಮುಂದೆ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ಪ್ರಾಧಿಕಾರದ ಮೂಲಕವೇ ನಿರ್ವಹಣೆ ಮಾಡಲಾಗುವುದು' ಎಂದು ತಿಳಿಸಿದರು.

ಒಂದು ಹೊಸ ವಿಮಾನ ಖರೀದಿಗೆ ₹ 200 ಕೋಟಿ ವೆಚ್ಚವಾಗಲಿದೆ. ₹600 ಕೋಟಿ ವೆಚ್ಚದಲ್ಲಿ ಮೂರು ವಿಮಾನ ಖರೀದಿಸಿ ಬೆಂಗಳೂರಿನಿಂದ ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿವೆ ವಿಮಾನಯಾನ ಸೇವೆ ಒದಗಿಸುವ ಯೋಚನೆ ಇದೆ. ಈ ಕುರಿತು ವಿಮಾನಯಾನ ಕ್ಷೇತ್ರದ ತಜ್ಞರ ಜತೆ ಚರ್ಚಿಸಲಾಗುತ್ತಿದೆ ಎಂದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಕೈಗಾರಿಕಾ ಇಲಾಖೆಯಲ್ಲಿ ₹60,000 ಕೋಟಿ ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಹಲವು ಹೊಸ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.