ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅಪಹರಣದ ಆರೋಪ ಹೊತ್ತಿರುವ ಶಾಸಕ ರೇವಣ್ಣನವರ ಕುಟುಂಬ ತುಂಬಾ ಪ್ರಭಾವಿಯಾದದ್ದು. ಜೈಲಿನಲ್ಲಿರುವ ಈ ಆರೋಪಿಗೆ ಜಾಮೀನು ದೊರೆತರೆ ಪ್ರಕರಣದಲ್ಲಿನ ಸಂತ್ರಸ್ತೆಯರನ್ನು ಬೆದರಿಸುವ ಸಾಧ್ಯತೆ ಇದೆ. ಇಂತಹುದೇ ಅಪರಾಧ ಪುನರಾವರ್ತನೆಯೂ ಆಗಬಲ್ಲದು’ ಎಂದು ಪ್ರಾಸಿಕ್ಯೂಷನ್ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ಆತಂಕ ವ್ಯಕ್ತಪಡಿಸಿದರು.

ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಜಯ್ನಾ ಕೊಠಾರಿ, ‘ಆರೋಪಿ ರೇವಣ್ಣ ನೀಡಿದ್ದ ಸೂಚನೆಯ ಅನುಸಾರವೇ ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿತ್ತು. ಸಾಕ್ಷಿಗಳ ಹೇಳಿಕೆಯಲ್ಲಿಯೂ ರೇವಣ್ಣನ ಹೆಸರು ಉಲ್ಲೇಖವಾಗಿದೆ. ಇದು ಸ್ಪಷ್ಟವಾಗಿ ಅಪಹರಣದ ಪ್ರಕರಣವಾಗಿದ್ದು, ಭಾರತೀಯ ದಂಡ ಸಂಹಿತೆ–1860ರ ಕಲಂ 364ಎ ಅನ್ವಯ ಆಗುತ್ತದೆ’ ಎಂದರು.
.ಪ್ರಜ್ವಲ್ ರೇವಣ್ಣ ಬಗ್ಗೆ ಯಾರೂ ದೂರು ನೀಡಿಲ್ಲ: ರಾಷ್ಟ್ರೀಯ ಮಹಿಳಾ ಆಯೋಗ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್.
‘ಅಂತೆಯೇ, ರೇವಣ್ಣನವರ ಪುತ್ರ ಪ್ರಜ್ವಲ್ ಹಲವು ಪ್ರಕರಣಗಳಲ್ಲಿ ಆರೋಪಿ ಆಗಿದ್ದಾನೆ. ಈಗಾಗಲೇ ಆತ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ 196 ದೇಶಗಳಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ಪ್ರಕರಣದಲ್ಲಿ ಇನ್ನೂ ಸಾಕಷ್ಟು ಸಂತ್ರಸ್ತ ಮಹಿಳೆಯರಿದ್ದು, ರೇವಣ್ಣಗೆ ಜಾಮೀನು ನೀಡಿದರೆ ಇವರ ಮೇಲೆ ಪ್ರಭಾವ ಬೀರುವ ಸಾಧ್ಯತೆಯೂ ಇದೆ. ಇದರಿಂದ ಅವರೆಲ್ಲಾ ನಿರ್ಭಯವಾಗಿ ಸಾಕ್ಷ್ಯ ನುಡಿಯಲು ಸಾಧ್ಯವಿಲ್ಲ. ಹಾಗಾಗಿ, ಈ ಪ್ರಕರಣದಿಂದ ಲೈಂಗಿಕ ದೌರ್ಜನ್ಯ ಎಸಗುವವರಿಗೆ ಒಂದು ಸ್ಪಷ್ಟ ಸಂದೇಶ ಹೋಗುವಂತಾಗಬೇಕು’ ಪ್ರತಿಪಾದಿಸಿದರು.

ಇದಕ್ಕೆ ಪ್ರತಿಯಾಗಿ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ‘ರೇವಣ್ಣ ವಿರುದ್ಧ ದಾಖಲಿಸಿರುವ ಪ್ರಕರಣ ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿದೆ. ಅವರ ವಿರುದ್ಧ ಈತನಕ ಒಂದೇ ಒಂದು ಸಾಕ್ಷಿಯೂ ದೊರೆತಿಲ್ಲ. ಚುನಾವಣೆ ವೇಳೆ ಎಫ್ಐಆರ್ ದಾಖಲಿಸಲಾಗಿದೆ. ಇದು ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದ ಕೇಸು. ಎಫ್ಐಆರ್ ಕೂಡಾ ಸರಿಯಾದ ಕ್ರಮದಲ್ಲಿ ಇಲ್ಲ. ಅಷ್ಟಕ್ಕೂ ಎಸ್ಐಟಿ ತನಿಖೆಯಲ್ಲಿ ಯಾವ ಪ್ರಗತಿ ಸಾಧಿಸಲಾಗಿದೆ’ ಎಂದು ಪ್ರಶ್ನಿಸಿದರು.
.ಅಪಹರಣ ಕೇಸ್: ಜಾಮೀನು ಕೋರಿ ಎಚ್.ಡಿ. ರೇವಣ್ಣ ಅರ್ಜಿ– ನಾಳೆ ವಿಚಾರಣೆ.ರೇವಣ್ಣ ಮನೆಯಲ್ಲಿ ಎಸ್ಐಟಿ ತಂಡದಿಂದ ಸ್ಥಳ ಮಹಜರು.
‘ಈ ಮೊದಲು ರೇವಣ್ಣ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಪಹರಣಕ್ಕೆ ಒಳಗಾಗಿದ್ದಾಳೆ ಎನ್ನಲಾದ ಮಹಿಳೆಯ ಸುರಕ್ಷತೆ ಬಗ್ಗೆ ಪ್ರಸ್ತಾಪಿಸಿ ನಿರಾಕರಿಸಲಾಗಿತ್ತು. ಆದರೆ, ಸಂತ್ರಸ್ತ ಮಹಿಳೆ ಅಂದೇ ಪತ್ತೆಯಾಗಿದ್ದಾರೆ. ಈ ಪ್ರಕರಣದಲ್ಲಿ ಮಹಿಳೆಯನ್ನು ಸುಳ್ಳು ಹೇಳಿ ಕರೆದೊಯ್ದಿದ್ದಾರೆ ಎನ್ನಲಾಗದು. ಅಪಹರಣ ಎಂದರೆ, ಬಲವಂತದಿಂದ ಮೋಸ ಮಾಡಿ ಕರೆದೊಯ್ಯುವುದು’ ಎಂದು ವಿವರಿಸಿದರು.

‘ಇನ್ನಷ್ಟು ವಾದ ಮಂಡಿಸಬೇಕಿದ್ದು ಸಮಯ ನೀಡಬೇಕು’ ಎಂಬ ಪ್ರಾಸಿಕ್ಯೂಷನ್ ಕೋರಿಕೆಯನ್ನು ಮನ್ನಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.