ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ (6ನೇ ಗ್ಯಾರಂಟಿ) ಹೆಚ್ಚಿಸುವಂತೆ ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ನೇತೃತ್ವದಲ್ಲಿ ಬುಧವಾರ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

6ನೇ ಗ್ಯಾರಂಟಿ ರೂಪದಲ್ಲಿ ಗೌರವಧನ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಕೆಲವು ಜನಪರ ಯೋಜನೆ ಘೋಷಿಸಲಾಗಿದೆ. ಆದರೆ, ಮಹಿಳಾ ಸಮುದಾಯವನ್ನು ಸಬಲೀಕರಣ ಮಾಡಲು ನಿರ್ಲಕ್ಷ್ಯವಹಿಸಿಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಚುನಾವಣೆಗೂ ಮೊದಲು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರೇ 6ನೇ ಗ್ಯಾರಂಟಿಯಾಗಿ ಗೌರವಧನ ಹೆಚ್ಚಿಸುವ ಭರವಸೆ ನೀಡಿದ್ದರು. ಆದರೆ ಮಾತು ತಪ್ಪಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹15 ಸಾವಿರ, ಸಹಾಯಕಿಯರಿಗೆ ₹10 ಸಾವಿರ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ನಿವೃತ್ತರಿಗೆ ₹3 ಲಕ್ಷ ಇಡುಗಂಟು ನೀಡುವ ಭರವಸೆಯೂ ಈಡೇರಿಲ್ಲ ಎಂದು ಆಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.