ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ, ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಮಂಗಳವಾರ
ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕಕ್ಕೆ ರೂಪಿಸಿರುವ ಪ್ರತ್ಯೇಕ ಧ್ವಜದ ಚಿತ್ರವಿದ್ದ ಬ್ಯಾನರ್ ಹಾಕಿಕೊಂಡು, ಧ್ವಜದ ಬಣ್ಣದ ಪಟ್ಟಿಗಳನ್ನು ಕುತ್ತಿಗೆಗೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದು ವಿಶೇಷ. ಪ್ರತ್ಯೇಕ ಧ್ವಜ ಹಾರಿಸಬೇಕೆಂಬ ಪ್ರಯತ್ನಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಇದರಿಂದಾಗಿ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಅಡಿವೇಶ ಇಟಗಿ ಮಾತನಾಡಿ, ‘ಉತ್ತರ ಕರ್ನಾಟಕದ 13 ಜಿಲ್ಲೆಗಳ ನಕ್ಷೆಯನ್ನು ಒಳಗೊಂಡ ಪ್ರತ್ಯೇಕ ಧ್ವಜವನ್ನು ಹಾರಿಸುವುದು ನಮ್ಮ ಉದ್ದೇಶವಾಗಿತ್ತು. ಆದರೆ, ಪ್ರತಿಭಟನಾ ಸ್ಥಳಕ್ಕೆ ಬರುವಾಗಲೇ ನಮ್ಮಿಂದ ಧ್ವಜ ಕಸಿದುಕೊಂಡರು’ ಎಂದರು.

‘ವಿವಿಧ ಪ್ರಮುಖ ಇಲಾಖೆಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಬೇಡಿಕೆಗಳು ಈಡೇರದೇ ಇರು ವುದರಿಂದಾಗಿ, ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರವು ಮಾತು ತಪ್ಪಿರುವುದೇ ಈ ಹೋರಾಟಕ್ಕೆ ಕಾರಣ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಹೇಳಿದರು.

ಪ್ರತ್ಯೇಕ ರಾಜ್ಯದ ಧ್ವಜ ಹಾರಿಸುವ ಶಂಕೆಯಿಂದ, ಮುಂಜಾಗ್ರತಾ ಕ್ರಮವಾಗಿ 10 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು, ನಂತರ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.