ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಇಲ್ಲಿನ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಕೆ.ಎಸ್. ಈಶ್ವರಪ್ಪ ಅವರು ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನೀಡಿರುವ ಹೇಳಿಕೆಯಿಂದ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆಯನ್ನು ಉಂಟು ಮಾಡುತ್ತದೆ. ಗಲಭೆಗಳು ಜರುಗಬಹುದು ಎಂದು ಗೊತ್ತಿದ್ದರೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನಿಜಲಿಂಗಪ್ಪ ಬಡಾವಣೆಯ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಐಪಿಸಿ 505(1)(ಸಿ), 505(2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.