ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗೆ ಬೇರೆ ಕೇಂದ್ರಗಳಿಗೆ ತೆರಳಬೇಕು ಎನ್ನುವ ಸುತ್ತೋಲೆಗೆ ಆಕ್ಷೇಪ ವ್ಯಕ್ತವಾದ ನಂತರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿನ ಪ್ರಯೋಗಾಲಯಗಳ ಸೌಕರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಹಂಚಿಕೆ ಮಾಡಲಾಗುವುದು. ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿ ಅಲ್ಲದೇ, ಬೇರೆ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಅವರದೇ ಕಾಲೇಜಿನ ಉಪನ್ಯಾಸಕರನ್ನು ಆಂತರಿಕ ಪರೀಕ್ಷಕರಾಗಿ ನೇಮಿಸಲಾಗುವುದು ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಒಂದೇ ಕೇಂದ್ರ ಲಭ್ಯವಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಅದೇ ಕೇಂದ್ರದಲ್ಲೇ ಪರೀಕ್ಷೆಗೆ ಹಾಜರಾಗಲು ಸಮ್ಮತಿಸಲಾಗಿದೆ. ಪ್ರತಿ ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ ₹9.60 ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ್ದು, ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಉಪಕರಣಗಳನ್ನು ಖರೀದಿಸಲು ಹಣ ಬಳಸಿಕೊಳ್ಳಬಹುದು ಎಂದಿದ್ದಾರೆ.

ಪ್ರತಿ ಉಪನ್ಯಾಸಕರಿಗೆ ನಾಲ್ಕು ದಿನಗಳು ಮಾತ್ರ ಪರೀಕ್ಷಾ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ನೀಡಲಾಗಿದ್ದು, ಪ್ರತಿಯೊಬ್ಬರೂ ಪಿಯು ಪರೀಕ್ಷಾ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.