ವಿಧಾನಸಭೆ: ₹ 5 ಕೋಟಿವರೆಗಿನ ಮೌಲ್ಯದ ಕಾಮಗಾರಿಗಳನ್ನು ನೇರವಾಗಿ ಕೈಗೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯಡಿ ವಿನಾಯ್ತಿ ನೀಡುವಂತೆ ವಿಧಾನಮಂಡಲದ ಸಾರ್ವಜನಿಕ ಉದ್ಯಮಗಳ ಸಮಿತಿ ಶಿಫಾರಸು ಮಾಡಿದೆ.

ಕೆಆರ್‌ಐಡಿಎಲ್‌ಗೆ ಸಂಬಂಧಿಸಿದ ಸಮಿತಿಯ ವರದಿಯನ್ನು ಸಾರ್ವಜನಿಕ ಉದ್ಯಮಗಳ ಸಮಿತಿ ಸದಸ್ಯ ಯು.ಬಿ. ಬಣಕಾರ್ ಸದನದಲ್ಲಿ ಬುಧವಾರ ಮಂಡಿಸಿದರು.

ನಿಗಮವು ಈಗ ಕಟ್ಟಡ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಮಾತ್ರ ನಿರ್ವಹಿಸುತ್ತಿದೆ. ಕಚೇರಿಗಳ ಆಧುನೀಕರಣ, ಗ್ರಂಥಾಲಯಗಳಿಗೆ ಪೀಠೋಪಕರಣ ಪೂರೈಕೆ, ಕಂಪ್ಯೂಟರ್, ಲ್ಯಾಪ್‌ಟಾಪ್ ಪೂರೈಕೆ, ಸೋಲಾರ್ ದೀಪಗಳು ಮತ್ತು ಹೈಮಾಸ್ಟ್ ದೀಪಗಳ ಅಳವಡಿಸಲು ಅನುಕೂಲವಾಗುವಂತೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂಬ ಶಿಫಾರಸು ವರದಿಯಲ್ಲಿದೆ.

ನಿಗಮವು ಕಾಮಗಾರಿಗಳ ಕುರಿತು ಸಮಗ್ರ ಮಾಹಿತಿ ನೀಡುವಂತಹ ಹೊಸ ತಂತ್ರಾಂಶ ಅಳವಡಿಸಿಕೊಳ್ಳಬೇಕು. ಆಡಳಿತಾತ್ಮಕ ಅನುಮೋದನೆ ಮತ್ತು ತಾಂತ್ರಿಕ ಅನುಮೋದನೆ ಬಳಿಕವೇ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಗಳನ್ನು ಕೈಗೊಳ್ಳಲು ವಿಫಲವಾಗುವ ವೆಂಡರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಆದೇಶ ಹೊರಡಿಸಬೇಕು. ₹ 2 ಕೋಟಿಗಿಂತ ಹೆಚ್ಚು ಮೌಲ್ಯದ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ವಿಭಜಿಸುವುದನ್ನು ನಿರ್ಬಂಧಿಸಿ ಆರ್ಥಿಕ ಇಲಾಖೆಯು ಸುತ್ತೋಲೆ ಹೊರಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.