ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

24ರಿಂದ ದ್ವಿತೀಯ ಪಿಯುಸಿ 3ನೇ ಪರೀಕ್ಷೆ

Published 22 ಜೂನ್ 2024, 14:35 IST
Last Updated 22 ಜೂನ್ 2024, 14:35 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ– 3ನೇ ವಾರ್ಷಿಕ ಪರೀಕ್ಷೆಯು ಇದೇ 24ರಿಂದ ಜುಲೈ 5ರವರೆಗೆ ನಡೆಯಲಿದೆ. 248 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ವಾರ್ಷಿಕ ಮೂರು ಪರೀಕ್ಷಾ ಪದ್ಧತಿ ಅನುಸಾರ ಮೊದಲ ಎರಡು ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಮೂರನೇ ಅವಕಾಶ ಇದಾಗಿದೆ. 

ಕಲಾ ವಿಭಾಗದಲ್ಲಿ 30,811, ವಿಜ್ಞಾನ 19,783, ವಾಣಿಜ್ಯ ವಿಭಾಗದಲ್ಲಿ 25,401 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿದೆ. ಜಿಲ್ಲಾ, ತಾಲ್ಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ರಚಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT