ಬೆಂಗಳೂರು: ಪಿಯು ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲೂ 15ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ಚಿಂತನೆ ನಡೆಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

‘ರಾಜ್ಯದ ದ್ವಿತೀಯ ಪಿಯು ಫಲಿತಾಂಶವನ್ನು ಕೇಂದ್ರೀಯ ಮಂಡಳಿಗಳ ಫಲಿತಾಂಶಗಳೊಂದಿಗೆ ಹೋಲಿಸಿದಾಗ ರಾಜ್ಯದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಮತ್ತು ಅಂಕಗಳ ಸಾಮರ್ಥ್ಯ ಕಡಿಮೆಯಾಗುತ್ತಿದೆ. ವೃತ್ತಿ ಪರ ಕೋರ್ಸ್ಗಳ ಸೀಟುಗಳಿಗಾಗಿ ಸಿಬಿಎಸ್ಇ ವಿದ್ಯಾರ್ಥಿಗಳ ಜತೆ ಸ್ಪರ್ಧಿಸುವ ಸವಾಲನ್ನು ಎದುರಿಸುತ್ತಿ ದ್ದಾರೆ. ಹಾಗಾಗಿ, ಉತ್ತೀರ್ಣತೆಯ ಶೇಕಡಾವಾರು ಪ್ರಮಾಣ ಸುಧಾರಿಸಲು ಪ್ರಥಮ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಈ ಪದ್ಧತಿ ಅಳವಡಿಸಿಕೊಳ್ಳಬಹುದು’ ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಪ್ರಸ್ತುತ, ಪಿಯು ಪ್ರಶ್ನೆ ಪತ್ರಿಕೆ ವಿವರಣಾತ್ಮಕ ಉತ್ತರಗಳನ್ನು ಮಾತ್ರ ಒಳಗೊಂಡಿದೆ. ಒಂದು ಅಂಕದ ಪ್ರಶ್ನೆ ಗಳಿಗೂ ವಿವರಣಾತ್ಮಕ ಉತ್ತರಗಳನ್ನು ವಿದ್ಯಾರ್ಥಿಗಳು ಬರೆಯಬೇಕಿದೆ. ಹಾಗಾಗಿ, ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ.

ಪ್ರಸಕ್ತ ವರ್ಷದ ಆರಂಭದಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದರು. ಆದರೆ ಸಿಬಿಎಸ್ಇ ಫಲಿತಾಂಶ ಶೇ 90ಕ್ಕಿಂತ ಹೆಚ್ಚಿದೆ.

ಪದವಿ ಕಾಲೇಜುಗಳ ಪ್ರವೇಶಕ್ಕೆ ಪಿಯು ಫಲಿತಾಂಶವೇ ಮುಖ್ಯವಾಗಿರುತ್ತದೆ. ಈಚಿನ ದಿನಗಳಲ್ಲಿಉನ್ನತ ಶಿಕ್ಷಣದಲ್ಲಿ ದಾಖಲಾತಿ ಕಡಿಮೆಯಾಗು ತ್ತಿದೆ. ಬಹುಆಯ್ಕೆಯ ಪ್ರಶ್ನೆಗಳ ಅಳವಡಿಕೆಯಿಂದ ಪಿಯು ಫಲಿತಾಂಶ ದಲ್ಲಿ ಹೆಚ್ಚಳವಾದರೆ ಪದವಿ ಪ್ರವೇಶಕ್ಕೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆ ಯೂ ಈ ಆಲೋಚನೆಯ ಹಿಂದಿದೆ.

‘ಅಧಿಕಾರಿಗಳ ಮಾತಿಗೆ ಸಹಮತ ವ್ಯಕ್ತಪಡಿಸಿರುವ ಸಚಿವ ನಾಗೇಶ್,
ಬಹು ಆಯ್ಕೆ ಪ್ರಶ್ನೆಗಳ ಅಳವಡಿಕೆಯ ಪ್ರಸ್ತಾವಕ್ಕೆ ಒಲವು ತೋರಿದ್ದಾರೆ. ಆದರೂ, ಇನ್ನಷ್ಟು ಚರ್ಚೆಯ ನಂತರವಷ್ಟೇ ಅಂತಿಮ ನಿರ್ಧಾರ ಸಾಧ್ಯ’ ಎಂದು ಇಲಾಖೆಯ ಮೂಲಗಳು ಖಚಿತ ಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.