ಬೆಂಗಳೂರು: ದ್ವಿತೀಯ ಪಿಯುಸಿಯ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಪದವಿಪೂರ್ವ ಪಠ್ಯಕ್ರಮ ಬೋಧಿಸುವ ಆಯಾ ವಿಷಯಗಳ ಉಪನ್ಯಾಸಕರಿಂದ ಸಿದ್ಧಪಡಿಸಿರುವ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಳಸಿಕೊಂಡು 2024–25ನೇ ಸಾಲಿನ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಫಲಿತಾಂಶ ಉತ್ತಮಪಡಿಸಲು ಎಲ್ಲ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಕ್ರಮಕೈಗೊಳ್ಳಬೇಕು ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸೂಚಿಸಿದ್ದಾರೆ.

ಪ್ರತಿ ವಿಷಯಗಳ ಪ್ರಶ್ನೆಪತ್ರಿಕೆಯಲ್ಲಿ ನೀಡಿರುವ ಸೂಚನೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಬೇಕು. ಆಯಾ ವಿಷಯಗಳ ಲಿಖಿತ ಪರೀಕ್ಷೆಗೆ ನಿಗದಿಪಡಿಸಿರುವ ಒಟ್ಟು ಅಂಕಗಳು, ಪರೀಕ್ಷಾ ಅವಧಿ ಮತ್ತಿತರ ವಿಷಯಗಳನ್ನು ಮನವರಿಕೆ ಮಾಡಿಸಬೇಕು ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ http://kseab.karnataka.gov.in ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.