ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಮಾರ್ಚ್ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದ್ದು, ಪರೀಕ್ಷಾ ಶುಲ್ಕದ ವಿವರಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಕಳೆದ ಸೆಪ್ಟೆಂಬರ್ನಲ್ಲಿ ನಡೆದ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾರ್ಚ್ನ ವಾರ್ಷಿಕ ಪರೀಕ್ಷೆಯ ಶುಲ್ಕ ಕಟ್ಟಿಸಿಕೊಳ್ಳಬೇಕು. ಈ ಅರ್ಜಿಗಳನ್ನು ಇಲಾಖೆಯ ಆನ್ಲೈನ್ ಪೋರ್ಟಲ್ಗೆ ಅಪ್ಲೋಡ್ ಮಾಡಬೇಕು. ಉಪನಿರ್ದೇಶಕರ ಕಚೇರಿಗೆ ಒಂದೇ ಕಂತಿನಲ್ಲಿ ಸಲ್ಲಿಸಬೇಕು ಎಂದು ಇಲಾಖೆ ಎಲ್ಲ ಪ್ರಾಚಾರ್ಯರಿಗೆ ಸೂಚನೆ ನೀಡಿದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಪ್ರವರ್ಗ–1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ವಿದ್ಯಾರ್ಥಿಗಳಿಗೆ ಒಂದು ವಿಷಯಕ್ಕೆ ₹140, ಎರಡು ವಿಷಯಕ್ಕೆ ₹270, ಮೂರು ಅಥವಾ ಅದಕ್ಕಿಂತ ಹೆಚ್ಚು ವಿಷಯಗಳಿಗೆ ₹400 ಪರೀಕ್ಷಾ ಶುಲ್ಕ ನಿಗದಿ ಮಾಡಲಾಗಿದೆ. ಇದರ ಜೊತೆಗೆ, ಎಲ್ಲ ವಿದ್ಯಾರ್ಥಿಗಳು ₹50 ಅಂಕಪಟ್ಟಿ ಶುಲ್ಕ ಕಟ್ಟಬೇಕು.

ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಪ್ರಥಮ ಬಾರಿಗೆ ಒಂದು ವಿಷಯಕ್ಕೆ ₹175, ದ್ವಿತೀಯ ಅಥವಾ ಅಂತಿಮ ಬಾರಿಗೆ ಒಂದು ವಿಷಯಕ್ಕೆ ₹350 ಫಲಿತಾಂಶ ತಿರಸ್ಕರಣಾ ಶುಲ್ಕ ನಿಗದಿ ಮಾಡಲಾಗಿದೆ. ದಂಡರಹಿತವಾಗಿ ನ.13, ದಂಡಸಹಿತವಾಗಿ ಶುಲ್ಕ ಕಟ್ಟಲು ನ.27 ಕೊನೆಯ ದಿನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.