ಬೆಂಗಳೂರು: ‘ದೊಡ್ಡ ನಾಯಕರೊಬ್ಬರು ಟಿಕೆಟ್ ತಪ್ಪಿಸಿದ್ದಾರೆ. ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ’ ಎಂದು ಪುಲಕೇಶಿನಗರ ಕ್ಷೇತ್ರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿ, ‘ಹಾಲಿ ಶಾಸಕನಾಗಿದ್ದರೂ ನನಗೆ ಟಿಕೆಟ್ ಕೊಟ್ಟಿಲ್ಲ. ನಾನು ಎಲ್ಲ ಸಮು
ದಾಯದವರ ಜೊತೆ ಚೆನ್ನಾಗಿದ್ದೇನೆ. ಕ್ಷೇತ್ರದಲ್ಲಿ ಹಿಂದೂ- ಮುಸ್ಲಿಂ ಅಣ್ಣ ತಮ್ಮಂದಿರಂತೆ ಇದ್ದಾರೆ’ ಎಂದರು.

‘ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ಕೂಡಾ ನನ್ನ ಪರವಾಗಿಯೇ ಇದ್ದಾರೆ’ ಎಂದರು.

‘ನಾನಿನ್ನೂ ಪಕ್ಷಕ್ಕೆ ರಾಜೀನಾಮೆ ಕೊಟ್ಟಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಜನರೇ ನನ್ನನ್ನು ಗೆಲ್ಲಿಸುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.