ಮಂಡ್ಯ:ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರುಗುಡಿಗೆರೆಗೆ ತರಲಾಯಿತು.

ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಮಿಲಿಟರಿ ವಾಹನದಲ್ಲಿ ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಮದ್ದೂರಿಗೆ ಕೊಂಡೊಯ್ಯಲಾಯಿತು.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹುತಾತ್ಮ ಯೋಧನ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು,ಹುಟ್ಟೂರಿನಲ್ಲಿ ಆಕ್ರಂದನ ಮುಗಿಲು ಮಟ್ಟಿದೆ.ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲುಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದಾರೆ.

ಭಾರತೀನಗರ ಸಮೀಪದಮೆಳ್ಳಹಳ್ಳಿಯ ಹೆಬ್ಬಾಳ ಬಳಿಯಿರುವ10ಗುಂಟೆ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಿಧಿ ಸಂಗ್ರಹ:ವೀರ ಯೋಧನಕುಟುಂಬಕ್ಕೆ ನೆರವು ನೀಡುವ ಸಲುವಾಗಿತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಅಂತ್ಯ ಸಂಸ್ಕಾರದ ಸ್ಥಳದಲ್ಲೇ ಪರಿಹಾರ ನಿಧಿ ಸಂಗ್ರಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.