ಮಂಡ್ಯ:‘ರಾಮನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಹಣದ ಆಮಿಷಕ್ಕೆ ಒಳಗಾಗಿ ಕಣದಿಂದ ಹಿಂದೆ ಸರಿದಿದ್ದಾರೆ’ಎಂದು ಶಾಸಕ ಆರ್.ಅಶೋಕ್ ಇಲ್ಲಿ ಗುರುವಾರ ಆರೋಪಿಸಿದರು.

‘ಬಿಜೆಪಿಯ ಎಲ್ಲಾ ಮುಖಂಡರ ಸರ್ವ ಸಮ್ಮತ ಅಭಿಪ್ರಾಯದಿಂದ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಅವರು ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್ ಮುಖಂಡರೊಂದಿಗೆ ತೆರಳಿದ್ದಾರೆ’ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ನಾನು ಮಂಡ್ಯ ಜಿಲ್ಲೆಯ ಉಸ್ತುವಾರಿಯಾಗಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಪ್ರಚಾರ ಮಾಡುತ್ತಿದ್ದೇನೆ. ಕೇಂದ್ರ ಸಚಿವ ಡಿ.ಬಿ.ಸದಾನಂದಗೌಡರು ರಾಮನಗರ ಉಸ್ತುವಾರಿಯಾಗಿದ್ದರು. ಅವರ ಜೊತೆ 15 ಮಂದಿ ಮುಖಂಡರು ಪ್ರಚಾರ ಮಾಡುತ್ತಿದ್ದರು. ಆದರೂ ಚಂದ್ರಶೇಖರ್ ದ್ರೋಹ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು’ಎಂದರು.

ಇದನ್ನೂ ಓದಿ:ರಾಮನಗರ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.