ಬೆಂಗಳೂರು: ರಾಜ್ಯ ಸರ್ಕಾರ ಬಡವರಿಗೆ ಬಿಪಿಎಲ್ ಪಡಿತರ ಚೀಟಿ ಮರಳಿ ನೀಡಬೇಕು. ಪಡಿತರ ಚೀಟಿ ರದ್ದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸದಿದ್ದರೆ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಬಡಾವಣೆಗಳಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದುಗೊಂಡ ಕುಟುಂಬದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ಕೆ.ಗೋಪಾಲಯ್ಯ ಇದ್ದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅಶೋಕ, ‘ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೇ ಕನ್ನ ಹಾಕುವ ಕೆಲಸ ಮಾಡಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್ ಕಾರ್ಡ್ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. ಎರಡು ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ’ ಎಂದು ಹೇಳಿದರು.

14 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲ. ಬ್ಯಾಂಕಿನಲ್ಲಿ ಸಾಲ ಪಡೆಯಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೇ ಕಾಂಗ್ರೆಸ್ ಸರ್ಕಾರ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಈಗ 11 ಲಕ್ಷ ಕಾರ್ಡ್ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುತ್ತದೆ ಎಂಬ ಮಾಹಿತಿ ಇದೆ. ಪಡಿತರ ಚೀಟಿ ರದ್ದು ಮಾಡುವುದಕ್ಕೂ ಮೊದಲು ನೋಟಿಸ್ ನೀಡಬೇಕಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರ್ಕಾರ ಹೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರ್ಕಾರದ ಕತ್ತಿನಪಟ್ಟಿ ಹಿಡಿದಿದ್ದಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಪಡಿತರ ಚೀಟಿ ರದ್ದುಪಡಿಸಿದರೆ ₹20 ಸಾವಿರ ಕೋಟಿ ಬರಬಹುದು. ಈ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು ಎಂಬುದೇ ಪಡಿತರ ಚೀಟಿ ರದ್ದು ಮಾಡುವುದರ ಹಿಂದಿನ ಉದ್ದೇಶ’ ಎಂದರು.

‘ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದೇ ಕಚೇರಿಯಲ್ಲಿ ಕುಳಿತು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿದ್ದಾರೆ. ಒಮ್ಮೆ ಕೊಟ್ಟು ಮತ್ತೆ ಕಿತ್ತುಕೊಳ್ಳುತ್ತಿರುವ ಕಟುಕ ಸರ್ಕಾರಕ್ಕೆ ಬಡವರ ಕಣ್ಣೀರು ಕಾಣಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.