ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ₹900 ಕೋಟಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ ₹18 ಕೋಟಿ ವಸೂಲಿ ಮಾಡುತ್ತಿದ್ದಾರೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘವೇ ಆರೋಪಿಸಿದೆ. ಅಂದರೆ ವರ್ಷಕ್ಕೆ ಸುಮಾರು ₹900 ಕೋಟಿಗೂ ಹೆಚ್ಚು ಲಂಚ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಹಾಗಾಗಿ, ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

‘ಅಬಕಾರಿ ಇಲಾಖೆ ಕಿರುಕುಳ ವಿರೋಧಿಸಿ ಮದ್ಯ ಮಾರಾಟಗಾರರು ಒಂದು ದಿನದ ಬಂದ್ಗೆ ಕರೆ ನೀಡಿದ್ದಾರೆ. ಆದಾಯಕ್ಕೆ ಮದ್ಯವನ್ನೇ ಸರ್ಕಾರ ನಂಬಿಕೊಂಡಿದೆ. ಹೀಗೆ ಮದ್ಯದಂಗಡಿ ಬಂದ್ ಮಾಡಿದರೆ ಖಜಾನೆ ಸಂಪೂರ್ಣ ಖಾಲಿಯಾಗಲಿದೆ. ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಆರೋಪ ಮಾಡಿದ್ದ ಕಾಂಗ್ರೆಸ್, ಅದಕ್ಕೆ ತಕ್ಕ ದಾಖಲೆ ನೀಡಲಿಲ್ಲ. ಈಗ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಭಿತ್ತಿಪತ್ರ ಅಂಟಿಸುವ ಅಭಿಯಾನಕ್ಕೆ ಕೈಜೋಡಿಸಬೇಕಿದೆ’ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲೇ ಕೆಲಸ ಮಾಡುವ ಪೊಲೀಸ್ ಅಧಿಕಾರಿಯ ಮುಂದೆ ಕುಳಿತು ತನಿಖೆ ಎದುರಿಸುತ್ತಿದ್ದಾರೆ. ತನಿಖೆಗೂ ನಿರ್ದಿಷ್ಟ ಸಮಯ ನಿಗದಿಪಡಿಸಿದ್ದು ಇದು ಹೇಗೆ ಸಾಧ್ಯ?
ಆರ್. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ

‘ಬೆಳಗಾವಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ಮೊಬೈಲ್ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ, ಹಿರಿಯ ಅಧಿಕಾರಿಗಳು ಪ್ರಕರಣವನ್ನು ಕಡೆಗಣಿಸಿದ್ದಾರೆ. ಗುತ್ತಿಗೆದಾರರೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ಅವರ ವಿರುದ್ಧ ತೊಡೆ ತಟ್ಟಿ ಹೋರಾಡಿದ್ದ ಸಿದ್ದರಾಮಯ್ಯ, ಈಗ ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.