ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಕುರಿತಂತೆ ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ರಾಹುಲ್ ಗಾಂಧಿ ಪರ ವಕೀಲರು, ‘ರಾಹುಲ್ ಗಾಂಧಿ ಚುನಾವಣೆಯ ನಿಮಿತ್ತ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಒಂದಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ರಾಹುಲ್ ಗಾಂಧಿ ಜೂನ್ 1ಕ್ಕೆ ಹಾಜರಾಗುವಂತೆ ಆದೇಶಿಸಿದರು.

ಮಾನಹಾನಿ ಮೊಕದ್ದಮೆ ದಾಖಲಿಸಲು ಫೆಬ್ರುವರಿ 23ರಂದೇ ಆದೇಶಿಸಿ, ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿತ್ತು. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಲುಪದ ಕಾರಣ ಮರು ಜಾರಿಗೊಳಿಸಲು ಆದೇಶಿಸಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಏಪ್ರಿಲ್ 29ಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ದೂರುದಾರರ ಪರ ಹೈಕೋರ್ಟ್ ವಕೀಲ ಎಂ.ವಿನೋದ್ ಕುಮಾರ್ ಹಾಜರಿದ್ದರು.

ಪ್ರಕರಣವೇನು?: ‘2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ’ ಎಂದು ಆರೋಪಿಸಿದ್ದರು. ‘ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ’ ಎಂದು ಈ ಖಾಸಗಿ ದೂರು ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.