ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 24 ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.

ಕಲ್ಯಾಣ ಕರ್ನಾಟಕ ವೃಂದದವರಿಗೆ 18 ಹಾಗೂ ಇತರರಿಗೆ 6 ಹುದ್ದೆಗಳನ್ನು ಮೀಸಲಿಡಲಾಗಿದೆ. ಆ.5ರಿಂದ 25ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅ. 3 ಮತ್ತು 4ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದು ಋಣಾತ್ಮಕ ಮೌಲ್ಯಮಾಪನವಾಗಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಇಂಗ್ಲಿಷ್, ಇತಿಹಾಸ, ಗಣಿತ, ಭೌತವಿಜ್ಞಾನ, ರಾಜ್ಯಶಾಸ್ತ್ರ, ಸಮಾಜ ಕಾರ್ಯ ಮತ್ತು ಸಮಾಜಶಾಸ್ತ್ರ ವಿಷಯಗಳ ಹುದ್ದೆಗಳನ್ನು ಕಲ್ಯಾಣ ಕರ್ನಾಟ ವೃಂದದವರಿಗೆ ಮೀಸಲಿಡಲಾಗಿದೆ. ಇತರ ವೃಂದದವರು ಸಸ್ಯಶಾಸ್ತ್ರ, ವಾಣಿಜ್ಯ ಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಅಪ್ಲಿಕೇಶನ್, ಪತ್ರಿಕೋದ್ಯಮ, ಮೈಕ್ರೋಬಯೊಲಜಿ, ಪ್ರಾಣಿಶಾಸ್ತ್ರ ವಿಷಯಗಳಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ http://kea.kar.nic.in ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.