ನವದೆಹಲಿ: ರೈಲ್ವೆ ಸಚಿವಾಲಯವು ಜೂನ್ 26ರಿಂದ ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಇನ್ನೂ ಐದು ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳ ಸಂಚಾರವನ್ನು ಆರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸೆಮಿ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಚಾಲನೆ ನೀಡುವ ನಿರೀಕ್ಷೆಯಿದೆ.

ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಟ್ನಾ-ರಾಂಚಿ, ಭೋಪಾಲ್-ಇಂದೋರ್ ಮತ್ತು ಭೋಪಾಲ್-ಜಬಲ್ಪುರ ಮಾರ್ಗಗಳಲ್ಲಿ ಈ ಐದು ರೈಲುಗಳು ಸಂಚರಿಸಲಿವೆ.

ಒಡಿಶಾದಲ್ಲಿ ನಡೆದ ದುರಂತದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರದ ಪ್ರಾರಂಭವನ್ನು ರದ್ದುಗೊಳಿಸಿತ್ತು. ವಂದೇ ಭಾರತ್‌ನ ರೈಲುಗಳು ಐದು ಮಾರ್ಗಗಳಲ್ಲಿ ಒಂದೇ ದಿನ ಕಾರ್ಯಾಚರಣೆ ಆರಂಭಿಸುತ್ತಿರುವುದು ಇದೇ ಮೊದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.