ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

'ಸೋಮಶೇಖರ್ ಅಡ್ಡ ಮತ ಚಲಾಯಿಸಿದ್ದಾರೆ' ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಖಚಿತಪಡಿಸಿದರು.

ಆತ್ಮಸಾಕ್ಷಿಯ ಮತ ಹಾಕಿದ್ದೇನೆ: ಎಸ್.ಟಿ. ಸೋಮಶೇಖರ್

'ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ' ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ' ಎಂದರು.

ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, 'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ' ಎಂದು ದೂರಿದರು.

'ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ' ಎಂದು ಹೇಳಿದ್ದರು.
.ಬೇರೆ ಪಕ್ಷದವರೂ ನಮಗೆ ಮತ ಹಾಕುತ್ತಾರೆ: ಸಿದ್ದರಾಮಯ್ಯ.ಗೆಲುವಿಗಾಗಿ ಅಲ್ಲ, ಒಗ್ಗಟ್ಟಿನ ಪ್ರದರ್ಶನಕ್ಕಾಗಿ ಸ್ಪರ್ಧೆ: ಎಚ್.ಡಿ. ಕುಮಾರಸ್ವಾಮಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.