ಬೆಂಗಳೂರು: ಕಳೆದ ಜೂನ್‌ನಲ್ಲಿ ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡಿದ್ದ ಬಿಜೆಪಿಯ ಅಶೋಕ್ ಗಸ್ತಿ(55) ಸ್ಥಿತಿ ಗಂಭೀರವಾಗಿದೆ ಎಂದು ಕುಟುಂಬಸ್ಥರು ಮತ್ತು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಅಶೋಕ್ ಗಸ್ತಿ ಅವರು ನಿಧನರಾಗಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು.ಅಶೋಕ ಗಸ್ತಿ ಅವರಿಗೆ ಸೆ.2ರಂದು ಕೋವಿಡ್ ದೃಢಪಟ್ಟಿತ್ತು. ಯಾವುದೇ ಲಕ್ಷಣ ಇಲ್ಲದಿದ್ದರೂ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ.ಬಹುಅಂಗಾಂಗ ವೈಫಲ್ಯದಿಂದ ಅವರು ಬಳಲುತ್ತಿದ್ದಾರೆ. ಹೀಗಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಸ್ತಿ ರಾಯಚೂರಿನವರು.ಬಿಜೆಪಿಯ ಶಿಸ್ತಿನ ಕಾರ್ಯಕರ್ತರಾಗಿದ್ದರು. ಅತ್ಯಂತ ಹಿಂದುಳಿದ ಸವಿತಾ ಸಮಾಜದವರಾಗಿದ್ದ ಗಸ್ತಿಯವರ ಪಕ್ಷ ನಿಷ್ಠೆಯನ್ನು ಪರಿಗಣಿಸಿ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.

ವಕೀಲರಾದ ಇವರು 1989ರಲ್ಲಿ ಬಿಜೆಪಿ ಸೇರ್ಪಡೆಯಾಗಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರಾದರು. 2009ರಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ನಂತರ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದರು. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಪಕ್ಷದ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸವಿತಾ ಸಮಾಜಕ್ಕೆ ಸೇರಿದ ಈ ಸಾಮಾನ್ಯ ಕಾರ್ಯಕರ್ತಗೆ ರಾಜ್ಯಸಭಾ ಟಿಕೆಟ್ ನೀಡಿತ್ತು. ರಾಜ್ಯಸಭಾ ಸದಸ್ಯರಾಗಿ ಇನ್ನೂ ನಾಲ್ಕು ತಿಂಗಳು ಆಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.