ಬೆಂಗಳೂರು: ನಗರದ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾದರು.

ಬುಧವಾರ ಮಧ್ಯಾಹ್ನ 3 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಠದಲ್ಲಿ ಅವರ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ರಾಮಕೃಷ್ಣ ಮಠದ ಅತ್ಯಂತ ಹಿರಿಯ ಸನ್ಯಾಸಿಯಾಗಿದ್ದರು. 1989ರಿಂದ ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದರು. ರಾಮಕೃಷ್ಣ ಮಠದ ಆರನೇ ಅಧ್ಯಕ್ಷರಾದ ಸ್ವಾಮಿ ವಿರಾಜನಂದರಿಂದ ಮಂತ್ರದೀಕ್ಷೆಯನ್ನು ಪಡೆದಿದ್ದರು. 1962ರಲ್ಲಿ ಮಠದ 8ನೇ ಅಧ್ಯಕ್ಷರಾಗಿದ್ದ ಸ್ವಾಮಿ ವಿಶುದ್ಧಾನಂದರಲ್ಲಿ ಸನ್ಯಾಸಿ ದೀಕ್ಷೆಯನ್ನು ಸ್ವೀಕರಿಸಿದ್ದರು. ಮಂಗಳೂರು, ಮೈಸೂರು, ಬೇಲೂರು ಮಠ ಮತ್ತು ಅಲ್ಲಹಾಬಾದ್ ರಾಮಕೃಷ್ಣ ಮಠಗಳಲ್ಲೂ ಇವರು ಕಾರ್ಯ ನಿರ್ವಹಿಸಿದ್ದರು.

ಕನ್ನಡ, ಇಂಗ್ಲೀಷ್ ಮತ್ತು ಸಂಸ್ಕೃತದಲ್ಲಿ ಹಲವು ಪುಸ್ತಕಗಳನ್ನು ಅವರು ಬರೆದಿದ್ದಾರೆ. ಅವರ ಕೆಲವು ಕೃತಿಗಳು ಫ್ರೆಂಚ್,ಕೊರಿಯನ್ ಮತ್ತು ಇಂಡೋನೇಷಿಯನ್ ಭಾಷೆಗಳಿಗೂ ಅನುವಾದಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.